ನವದೆಹಲಿ : ಧರ್ಮಸ್ಥಳ ತಲೆಬುರುಡೆ ಕೇಸ್ನಲ್ಲಿ ಚಿನ್ನಯ್ಯ ಹಿಂದಿದ್ದ ಟೀಂಗೆ ಸುಪ್ರೀಂ ಕೋರ್ಟ್ ಶಾಕ್ ಕೊಟ್ಟಿದೆ. 1995ರಿಂದ 2004ರ ವರೆಗಿನ ಪ್ರಕರಣಗಳ ತನಿಖೆಗೆ ಕೋರಿ ಸಲ್ಲಿಸಿದ್ದ PIL ವಜಾಗೊಳಿಸಿರುವ ಕೋರ್ಟ್, ಇಂತಹ ಪಿಐಎಲ್ ದಾಖಲಿಸಿರುವುದೇ ನಿಷ್ಫಲವೆಂದು ಅಭಿಪ್ರಾಯಪಟ್ಟಿದೆ.
ವಕೀಲ ಕೆ.ವಿ.ಧನಂಜಯ ಈ ಬಗ್ಗೆ ಪಿಐಎಲ್ ಸಲ್ಲಿಸಿದ್ದರು. ಇದು ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್ ಅಲ್ಲ. ಬದಲಾಗಿ ಪಬ್ಲಿಸಿಟಿ ಇಂಟರೆಸ್ಟ್ ಲಿಟಿಗೇಷನ್, ಪೈಸಾ ಇಂಟರೆಸ್ಟ್ ಲಿಟಿಗೇಷನ್, ಪ್ರೈವೇಟ್ ಇಂಟರೆಸ್ಟ್ ಲಿಟಿಗೇಷನ್, ಪೊಲಿಟಿಕಲ್ ಇಂಟರೆಸ್ಟ್ ಲಿಟಿಗೇಷನ್ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ಚಿನ್ನಯನನ್ನು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನನ್ನ ಬೆಳ್ತಂಗಡಿಗೆ ಪೊಲೀಸರು ಕರೆದೊಯ್ದಿದ್ದು, BNSS 183ರಡಿ ಹೇಳಿಕೆ ದಾಖಲು ಪ್ರಕ್ರಿಯೆ ನಡೆದಿದೆ. ಡಿಟೇಲ್ ಆಗಿ ಸ್ವಇಚ್ಛಾ ಹೇಳಿಕೆಯನ್ನ ಚಿನ್ನಯ್ಯ ಈ ವೇಳೆ ನೀಡಿದ್ದಾನೆ.

