ಪುತ್ತೂರು: ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಕೇರಳ ಮೂಲದ ವ್ಯಕ್ತಿಯೊಬ್ಬ ತನ್ನ ಕೈಯನ್ನು ಕತ್ತರಿಸಿಕೊಂಡ ಘಟನೆ ನಡೆದಿದೆ.
ಬಸ್ ನಿಲ್ದಾಣದಲ್ಲಿ ಭಾರೀ ರಕ್ತಸ್ರಾವ ಉಂಟಾಗಿದ್ದು, ಈ ವ್ಯಕ್ತಿ ಈ ರೀತಿ ಮಾಡಲು ಕಾರಣ ಏನೆಂದು ಇನ್ನೂ ತಿಳಿದು ಬಂದಿಲ್ಲ.
ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

