ಮಲ್ಪೆ ಬೀಚ್ ನಲ್ಲಿ ಈಜಲು ಹೋಗಿದ್ದ ಪ್ರವಾಸಿಗರು ನೀರುಪಾಲಾಗಿ ಇಬ್ಬರು ಮೃತಪಟ್ಟು, ಒಬ್ಬ ಪ್ರವಾಸಿಗ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಬೀಚ್ ನಲ್ಲಿ ತಕ್ಷಣ ಅನುಭವಿ ಲೈಫ್ ಗಾರ್ಡ್ ನೇಮಿಸುವಂತೆ ಮೀನುಗಾರ ಮುಖಂಡ ವಿಶ್ವಾಸ್ ಅಮೀನ್ ಜಿಲ್ಲಾಧಿಕಾರಿಯವರಲ್ಲಿ ಮನವಿ ಮಾಡಿದ್ದಾರೆ.
ಸಾರ್ವಜನಿಕ ವಲಯದಲ್ಲಿ ಜಿಲ್ಲಾಡಳಿತದ ನಿರ್ಲಕ್ಷ್ಯ ಎಂಬಂತೆ ಟೀಕೆಗಳು ವ್ಯಕ್ತವಾಗುತ್ತಿದ್ದು, ಬೀಚ್ ನಲ್ಲಿ ಯಾವುದೇ ಅನುಭವಿ ಲೈಫ್ ಗಾರ್ಡ್ ಇಲ್ಲದಿರುದೇ ಘಟನೆಗೆ ಕಾರಣವಾಗಿದ್ದು ಮಲ್ಪೆ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಪ್ರಮುಖ ಬೀಚ್ ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ನುರಿತ ಲೈಫ್ ಗಾರ್ಡ್ ಗಳನ್ನು ತಕ್ಷಣ ನೇಮಿಸುವಂತೆ ಉಡುಪಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದ್ದಾರೆ ಅಲ್ಲದೆ ವಿಶ್ವ ಪ್ರಸಿದ್ಧ ಮಲ್ಪೆ ಬೀಚ್ ನಲ್ಲಿ ಈಜು ಬಾರದ ಲೈಫ್ ಗಾರ್ಡ್ ಗಳನ್ನು ನೇಮಿಸಿರುವುದರ ಕುರಿತು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

