ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪುರದ ಸಂತೆ ಮಾರುಕಟ್ಟೆ ಬಳಿ ರಸ್ತೆ ದಾಟುತ್ತಿದ್ದ ವೃದ್ಧೆ ಪುರಸಭೆ ವ್ಯಾಪ್ತಿಯ ನಿವಾಸಿ ಲೂಸಿ ಕರ್ವೆಲೋ (72) ಅವರಿಗೆ ಕುಂದಾಪುರದಿಂದ ಬೈಂದೂರು ಕಡೆಗೆ ವೇಗವಾಗಿ ಬಂದ ಲಾರಿ ಢಿಕ್ಕಿಯಾದ ಘಟನೆ ಅ. 3ರ ರಾತ್ರಿ ಸಂಭವಿಸಿದೆ.
ರಸ್ತೆ ವಿಭಾಜಕದ ಅಂಚಿಗೆ ಬಿದ್ದ ಅವರ ತಲೆಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಸ್ಥಳೀಯರು ಕುಂದಾಪುರದ ಖಾಸಗಿ ಆಸ್ಪತ್ರೆಗೆ, ಬಳಿಕ ಮಣಿಪಾಲ ಕೆಎಂಸಿ, ಅನಂತರ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಕುರಿತು ಕುಂದಾಪುರ ಸಂಚಾರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

