ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ನವೆಂಬರ್ 6 ರಂದು ಮತ್ತು ಎರಡನೇ ಹಂತದ ಮತದಾನ ನವೆಂಬರ್ 11 ರಂದು ನಡೆಯಲಿದೆ. ನವೆಂಬರ್ 14 ಕ್ಕೆ ಫಲಿತಾಂಶ ಹೊರಬೀಳಲಿದೆ.
ಒಟ್ಟು 7.43 ಕೋಟಿ ಮತದಾರರಿರುವ ಬಿಹಾರ ರಾಜ್ಯದ ಒಟ್ಟು 243 ಕ್ಷೇತ್ರಗಳಿಗೆ ಒಟ್ಟು ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತ್ತು ಎರಡನೇ ಹಂತದಲ್ಲಿ 122 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು.
ಈ ಬಗ್ಗೆ ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸುದ್ಧಿಘೋಸ್ಟಿಯಲ್ಲಿ ಮಾಹಿತಿ ನೀಡಿದರು.

