ಉಡುಪಿ : ಉಡುಪಿಯ ಹಿರಿಯಡ್ಕ ಮೂಲದ ಐಎಎಸ್ ಅಧಿಕಾರಿಯೊಬ್ಬರು ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಹಿರಿಯಡ್ಕ ಸಮೀಪದ ಬೊಮ್ಮರಬೆಟ್ಟು ಎಂಬಲ್ಲಿ ಜನಿಸಿದ ರಾಜೇಶ್ ಪ್ರಸಾದ್ ಅಧಿಕಾರಿಯಾಗಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. ಜಮ್ಮು ಕಾಶ್ಮೀರ ಸರ್ಕಾರದಲ್ಲಿ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಇದೀಗ ಕೇಂದ್ರ ಸರ್ಕಾರದ ಗೃಹ ಸಚಿವಾಲಯ ಮುಂಬಡ್ತಿ ನೀಡಿ ಚಂಡೀಗಢದ ಮುಖ್ಯ ಕಾರ್ಯದರ್ಶಿಯಾಗಿ ನಿಯೋಜಿಸಿದೆ.
ಬೊಮ್ಮರಬೆಟ್ಟು ಗ್ರಾಮದ ರಾಜೇಶ್ ಪ್ರಸಾದ್, ಹಿರಿಯಡ್ಕ ಮತ್ತು ಬೊಮ್ಮರಬೆಟ್ಟುಗಳಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಪೂರೈಸಿ, ಉಡುಪಿ ಎಂಜಿಎಂ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಪದವಿ ಪಡೆದಿದ್ದರು.

