ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಪಿಕಪ್ ವಾಹನ ಸ್ಕಿಡ್ ಆಗಿ, ಮಗುಚಿ ಬಿದ್ದ ಪರಿಣಾಮ ವಾಹನದಲ್ಲಿದ್ದ ಮೂವರು ಗಾಯಗೊಂಡ ಘಟನೆ ಜಪ್ಪಿನಮೊಗರು ನೇತ್ರಾವತಿ ಸೇತುವೆ ಬಳಿ ನಡೆದಿದೆ.
ವಾಹನದ ಚಾಲಕ ರತೀಶ್ (38), ಹಾಗೂ ಶೈಲಜಾ (57) ಮತ್ತು ಶಾರದಾ(60) ಗಾಯಗೊಂಡಿದ್ದಾರೆ.ಗಾಯಗೊಂಡವರನ್ನು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಬೆಳಗ್ಗೆ 6 ಗಂಟೆಯ ಹೊತ್ತಿಗೆ ಮೀನು ಸಾಗಾಟದ ಈ ಪಿಕ್ ವಾಹನ (ಕೆಎಲ್ 14 ಎನ್ 8273). ಮಂಗಳೂರಿನಿಂದ ಕೇರಳದ ತಲಪಾಡಿ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿರ್ಲಕ್ಷ್ಯತನದಿಂದ ವಾಹನ ಸ್ಕಿಡ್ ಆಗಿ ಮಗುಚಿ ಬಿದ್ದ ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

