ಕಿನ್ನಿಗೋಳಿ : ಕಿನ್ನಿಗೋಳಿ ಎಸ್.ಕೋಡಿ ಬಳಿಯ ರೋಹನ್ ಎಸ್ಟೇಟ್ ಮುಂಭಾಗ ಕಾರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆ ದಿದ್ದಾರೆ.

ಎಸ್. ಕೋಡಿಯಾಗಿ ಹಳೆಯಂಗಡಿ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿಕೊಂಡು ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿತ್ತು.
ಮುಲ್ಕಿ ಪುನರೂರು ಮೊಗೇರ ದೈವಸ್ಥಾನ ಬಳಿಯ ನಿವಾಸಿಗಳಾದ ಸುರೇಂದ್ರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇವರು ಚಿಕಿತ್ಸೆ ಫಲಿಸದೇ ರವಿವಾರ ಸಂಜೆ ಸಾವನ್ನಪ್ಪಿದ್ದು ಹಿಂಬದಿ ಸವಾರ ಸಂದೀಪ್ ಯಾನೆ ಲೋಲಾಕ್ಷ ಎಂಬವರಿಗೆ ಅಲ್ಪಪ್ರಮಾಣದ ಗಾಯಗಳಾಗಿವೆ.
