ಬೈಂದೂರು: ಕಾರು ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಹ ಸವಾರೆ ಮೃತಪಟ್ಟ ಘಟನೆ ಬೈಂದೂರು ಬಳಿ ನಡೆದಿದೆ.

ಮೃತಪಟ್ಟ ಸಹ ಸವಾರೆ ತಸ್ಬೀಯಾ ಬೇಗಂ ಎಂದು ತಿಳಿದು ಬಂದಿದೆ.
ಗಾಯಗೊಂಡ ತಸ್ಬೀಯಾ ಬೇಗಂ ಕುಂದಾಪುರ ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
