ಬಜ್ಪೆ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆದರಿಕೆ ಹಾಕಿ ಪಟಾಕಿ ದರೋಡೆ ನಡೆಸಿದ ಮೂವರ ವಿರುದ್ಧ ಬಜ್ಪೆ ಪೊಲೀಸರು ಕೊಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.
ಬಂಧಿತರನ್ನು ರೌಡಿ ಶೀಟರ್ ಸಂಘಪರಿವಾರದ ಕಾರ್ಯಕರ್ತ ಪ್ರಶಾಂತ್ ಕಳವಾರು ಯಾನೆ ಪಚ್ಚು, ಗಣೇಶ್ ಮತ್ತು ಅಶ್ವಿತ್ ಎಂದು ತಿಳಿದು ಬಂದಿದೆ.
ಅಂಗಡಿಯವರಿಗೆ ಬೆದರಿಕೆ ಹಾಕಿ ಬಲವಂತವಾಗಿ ಪಟಾಕಿ ದರೋಡೆ ನಡೆಸಿದ ಈ ಮೂವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೊಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಮೂವರನ್ನು ಬಂಧಿಸಿದ್ದಾರೆ.
