ಪುತ್ತೂರು: ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗೆ ಗುಂಡೇಟು ಘಟನೆಗೆ ಸಂಬಂಧಿಸಿದಂತೆ ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 115/2025. ಕಲಂ 132, 109, 303(2) r/w 3(5) ಭಾರತೀಯ ನ್ಯಾಯ ಸಂಹಿತೆ 2023. ಮತ್ತು ಕಲಂ 4, 5, 6, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿ ಬಂಧಕ ಕಾಯ್ದೆ & ಸಂರಕ್ಷಣಾ ಕಾಯ್ದೆ 2020 ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಖರೀದಿ ಮಾಡಿರುವ ರಶೀದಿಗಳೆಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದ ದಾಖಲೆಗಳ ಬಗ್ಗೆ ವಿಚಾರಿಸಿದಾಗ, ಚನ್ನರಾಯಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿರವರು ದೃಢೀಕರಿಸಿದಂತೆ, ಶುಕ್ರವಾರದಂದು ಮಾತ್ರ ಜಾನುವಾರು ಸಂತೆ ನಡೆಯುತ್ತದೆ.
ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ದಾಖಲೆಗಳು (ರಶೀದಿ ಕ್ರಮ ಸಂಖ್ಯೆ: 27653 ಹಾಗೂ 27654 ಗಳನ್ನು) ತಿದ್ದಿ ಸುಳ್ಳು ಸೃಷ್ಟಿಸಿ ಹರಿದಾಡುತ್ತಿರುವುದು ಕಂಡು ಬಂದಿದೆ.
