ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಜುಗಾರಿ ಆಡುತ್ತಿರುವ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಲ್ಪೆ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ಉಮೇಶ್, ಸಿದ್ರಾಮೇಶ, ಹನುಮೇಶ, ಮಲ್ಲಿಕಾರ್ಜುನ ಹಡಪದ, ಶಿವಪ್ಪ ಸರದಾರ, ವಿರೂಪಾಕ್ಷ, ಬಸವರಾಜ, ಜಗದೀಶ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳಿಂದ ಪೊಲೀಸರು ಸೊತ್ತುಗಳನ್ನು ವಶಪಡಿಸಿಕೊಂಡು, ವಿಚಾರಣೆ ನಡೆಸಿದ್ದಾರೆ.
ನ. 13 ರಂದು ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಹನುಮಾನ್ ನಗರ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್ ಜುಗಾರಿ ಆಟವನ್ನು ಆಡುತ್ತಿರುವುದಾಗಿ ಖಚಿತ ಮಾಹಿತಿ ಬಂದಿದ್ದು, ಅದರಂತೆ ಅನೀಲ್ ಕುಮಾರ್ ಡಿ ಪೊಲೀಸ್ ಉಪನಿರೀಕ್ಷಕರು ಮಲ್ಪೆ ಪೊಲೀಸ್ ಠಾಣೆ ಇವರು ಠಾಣಾ ಸಿಬ್ಬಂದಿಯವರೊಂದಿಗೆ ಸ್ಥಳಕ್ಕೆ ತೆರಳಿ ನೋಡಲಾಗಿ ಅಲ್ಲಿನ ಇರುವ ಸಾರ್ವಜನಿಕ ಖಾಲಿ ಸ್ಥಳದಲ್ಲಿ 7-8 ಜನರು ನ್ಯೂಸ್ ಪೇಪರ್ ಹಾಸಿಕೊಂಡು ಕುಳಿತುಕೊಂಡಿದ್ದು, ಅಂದರ್ ಬಾಹರ್ ಎಂಬ ಇಸ್ಪೀಟ್ ಆಟ ಆಡುತ್ತಾ ಹಣವನ್ನು ಪಣವಾಗಿಟ್ಟು ಜೂಜಾಟ ಆಡುತ್ತಿರುವುದನ್ನು ಖಚಿತಪಡಿಸಿಕೊಂಡು ದಾಳಿ ಮಾಡಿ ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ 8 ಮಂದಿ ಆರೋಪಿಗಳನ್ನು ವಿಚಾರಿಸಿದ್ದು, ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿರುತ್ತಾರೆ.
ಆರೋಪಿಗಳು ಅಂದರ್ ಬಾಹರ್ ಜುಗಾರಿ ಆಟಕ್ಕೆ ಉಪಯೋಗಿಸಿದ ಸ್ವತ್ತುಗಳಾದ, ಹಳೆ ನ್ಯೂಸ್ ಪೇಪರ್-3, 52 ಇಸ್ಪೀಟ್ ಎಲೆಗಳು, ನಗದು ಹಣ ರೂ.5,860/- ಮತ್ತು VIVO ಮೊಬೈಲ್ ಫೋನ್-1, ಅಂದಾಜು ಮೌಲ್ಯ ರೂ. 3,000/-, SAMSUNG ಮೊಬೈಲ್ ಫೋನ್-1, ಅಂದಾಜು ಮೌಲ್ಯ ರೂ. 2,500/-, VIVO ಮೊಬೈಲ್ ಫೋನ್ -1, ಅಂದಾಜು ಮೌಲ್ಯ ರೂ.2,000/- 4.ಕೆಂಪು ಬಣ್ಣದ Honda Activa ಕಂಪೆನಿಯ ಸ್ಕೂಟರ್ KA 26 EB 8057 ಅಂದಾಜು ಮೌಲ್ಯ ರೂ 15,000/- ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
