ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿ.ಕೆ.ಶಿವಕುಮಾರ್ ಪರ ಘೋಷಣೆ ಕೇಳಿ ಬಂತು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಮಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ವೇಳೆ ನೂರಾ ಮಂದಿ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ್ದಾರೆ. ಕೆ.ಸಿ.ವೇಣುಗೋಪಾಲ್ ಅವರು ಬರುತ್ತಿದ್ದಂತೆ ಕಾರ್ಯಕರ್ತರ ಕಡೆಯಿಂದ ಕಡೆಗೆ ಡಿ.ಕೆ., ಡಿ.ಕೆ. ಎಂಬ ಘೋಷಣೆ ಕೇಳಿ ಬಂದಿದೆ.
ಸಿಎಂ ಬದಲಾವಣೆ ಬಗ್ಗೆ ಮಾಧ್ಯಮದವರು ಮಾತನಾಡಲು ಯತ್ನಿಸಿದರೂ ಕೆ.ಸಿ.ವೇಣುಗೋಪಾಲ್ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಉತ್ತರಿಸಿ, ಕೆ.ಸಿ.ವೇಣುಗೋಪಾಲ್ ಅವರು ಕಾಂಗ್ರೆಸ್ ಕಾರ್ಯಕ್ರಮಕ್ಕೆ ಮಂಗಳೂರಿಗೆ ಆಗಮಿಸಿದ್ದಾರೆ. ಆದ್ದರಿಂದ ನಾವು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಘೋಷಣೆ ಮಾಡಿದ್ದೇವೆ. ಇದರಲ್ಲಿ ಬೇರೆ ಅರ್ಥವಿಲ್ಲ ಎಂದು ಹೇಳಿದರು.
