ಬ್ರಹ್ಮಾವರದ ಹೆಸರಾಂತ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರ , ಉದ್ಯಮಿ, ಧಾರ್ಮಿಕ ಮುಂದಾಳು ಜೀವನ್ ಶೆಟ್ಟಿ ಬೈಕಾಡಿ ಇಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಲೋಕೋಪಯೋಗಿ ಇಲಾಖೆಯ ಕ್ಲಾಸ್ 1 ಗುತ್ತಿಗೆದಾರರಾಗಿದ್ದ ಜೀವನ್ ಶೆಟ್ಟಿ ಬೈಕಾಡಿಯವರು ಸಾಮಾಜಿಕವಾಗಿ , ಧಾರ್ಮಿಕ ಸೇವೆಗಳಲ್ಲಿ ಗುರುತಿಸಿಕೊಂಡವರು. ನೂರಾರು ಜನರಿಗೆ ಉದ್ಯೋಗದಾತರಾಗಿದ್ದ ಅವರು, ತಮ್ಮ ಪ್ರಾಮಾಣಿಕತೆಗೆ ಹೆಸರುವಾಸಿಯಾಗಿದ್ದವರು. ಇತ್ತೀಚೆಗೆ ಮಾರಣಾಂತಿಕ ಆರೋಗ್ಯ ಸಮಸ್ಯೆಗೆ ತುತ್ತಾಗಿದ್ದ ಅವರು ನಿಧನರಾಗಿದ್ದಾರೆ. ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.
