ಮಂಗಳೂರು : ಡ್ರಗ್ಸ್ ಮಾರಾಟ ಮಾಡುವ ಪೆಡ್ಲರ್ ಗಳಿಗೆ ನ್ಯಾಯಾಲಯದಲ್ಲಿ ಕಠಿಣ ಶಿಕ್ಷೆ ಕೊಡಿಸಿದ ಸರಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರನ್ನು ನಗರ ಪೊಲೀಸ್ ಆಯುಕ್ತರ ಕಚೇರಿ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು.

ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳಿಗೆ 12 ರಿಂದ 14 ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲು ದ.ಕ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿ, ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ ಸರಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರನ್ನು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಿದರು.
