ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಗಣಿಗಾರಿಕೆ ತಡೆಗಟ್ಟುವ ಉದ್ದೇಶದಿಂದ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಒಟ್ಟು 29 ಪೊಲೀಸ್ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ, ಹಗಲು–ರಾತ್ರಿ ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.




ಈ ಚೆಕ್ಪೋಸ್ಟ್ಗಳಲ್ಲಿ ಮರಳು, ಕೆಂಪು ಕಲ್ಲು, ಶಿಲೆಕಲ್ಲು ಹಾಗೂ ಎಂ–ಸ್ಯಾಂಡ್ ಸಾಗಾಟ ಮಾಡುವ ಎಲ್ಲಾ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ದಿನಾಂಕ 06–12–2025ರಿಂದ ಇದುವರೆಗೆ ಸುಮಾರು 3966 ವಾಹನಗಳನ್ನು ಪರಿಶೀಲಿಸಲಾಗಿದ್ದು, ಇದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಹಾಗೂ ಸರ್ಕಾರಕ್ಕೆ ರಾಯಧನ ಪಾವತಿಸದೇ ಸಾಗಾಟ ಮಾಡುತ್ತಿದ್ದ 11 ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.


ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಒಂದು ವಾಹನವನ್ನು ಜಪ್ತಿ ಮಾಡಿ, ಚಾಲಕ ಹಾಗೂ ಮಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ. ಉಳಿದ 10 ವಾಹನಗಳನ್ನು ಮಹಜರು ಮುಖೇನ ಸ್ವಾಧೀನಪಡಿಸಿಕೊಂಡು, ಮುಂದಿನ ಕ್ರಮಕ್ಕಾಗಿ ಉಡುಪಿ ಗಣಿ ಇಲಾಖೆಗೆ ವರದಿ ಕಳುಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗಣಿ ಇಲಾಖೆ ವಾಹನಗಳ ಆರ್ಸಿ ಮಾಲಕರಿಗೆ ಒಟ್ಟು 3 ಲಕ್ಷ 8 ಸಾವಿರ 710 ರೂಪಾಯಿ ದಂಡ ವಿಧಿಸಿದೆ.
ಮುಂದೆಯೂ ಅಕ್ರಮ ಸಾಗಾಟ ನಡೆಸುವವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಮುಂದುವರೆಯಲಿದೆ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
