ಉಡುಪಿ : ಕಟಪಾಡಿ ಓವರ್ ಬ್ರಿಡ್ಜ್ ನಿರ್ಮಾಣ ಆರಂಭದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಮಾನ್ಯ ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರು ಸಭೆಯಲ್ಲಿ ಭಾಗವಹಿಸಿ, ಶಾಲಾ ವಿದ್ಯಾರ್ಥಿಗಳು, ಪಾದಚಾರಿಗಳು, ಆಟೋ–ಟ್ಯಾಕ್ಸಿ ಸೇರಿದಂತೆ ಎಲ್ಲಾ ವಾಹನ ಸಂಚಾರ ಸುರಕ್ಷಿತವಾಗಿರಬೇಕೆಂದು ಒತ್ತಾಯಿಸಿದರು.

ಕೋಟೆ, ಕಟಪಾಡಿ ಸೇರಿದಂತೆ 8 ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪ್ರಮುಖರು ಸಂಚಾರ ಮಾರ್ಗ ಅಧಿಸೂಚನೆ ಪರಿಷ್ಕರಣೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ, ಪೊಲೀಸ್ ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಭಾಗವಹಿಸಿ, ಓವರ್ ಬ್ರಿಡ್ಜ್ ಕಾಮಗಾರಿ ವೇಳೆ ಜನಸಾಮಾನ್ಯರಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
