ಬಾಲಕನ ತಂದೆಯೂ ಚೂರಿಯಿಂದ ಇರಿದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು. ಕೌಟುಂಬಿಕ ಕಲಹದಲ್ಲಿ ಮನೆಯಲ್ಲಿ ಸಂಘರ್ಷ ನಡೆದ ಬಗ್ಗೆ ಅನುಮಾನ. ರಾಮಕುಂಜದ ವಸಂತ್ ಅಮೀನ್ ಪುತ್ರ ಮೋಕ್ಷ ಎಂಬ ಬಾಲಕ ಸಾವು.

ತಂದೆ ಮತ್ತು ಮಗನ ಮಧ್ಯೆ ಮನೆಯಲ್ಲಿ ಪರಸ್ಪರ ಜಗಳ ನಡೆದ ಮಾಹಿತಿ. ಈ ವೇಳೆ ಕೋವಿಯಿಂದ ಗುಂಡು ಹಾರಿದ್ದು, ಗುಂಡು ತಗುಲಿ ಬಾಲಕ ಸಾವು. ಹಲವು ಅನುಮಾನಕ್ಕೆ ಕಾರಣವಾದ ಬಾಲಕನ ಸಾವು.

ಬಾಲಕನೇ ಶೂಟ್ ಮಾಡಿಕೊಂಡಿದ್ದಾ ಅಥವಾ ತಂದೆಯೇ ಶೂಟ್ ಮಾಡಿದ್ದಾ ಎಂಬ ಬಗ್ಗೆ ಅನುಮಾನ. ಗಲಾಟೆಯಲ್ಲಿ ತಂದೆ ವಸಂತ್ ಅಮೀನ್ ಗೂ ಚೂರಿ ಇರಿತದ ಗಾಯವಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು. ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದ ಮೋಕ್ಷ. ಬಾಲಕನ ಸಾವಿಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಕಡಬ ಠಾಣೆ ಪೊಲೀಸರಿಂದ ಘಟನೆ ನಡೆದ ಸ್ಥಳದಲ್ಲಿ ತನಿಖೆ.
