ಮಂಗಳೂರು: ಖ್ಯಾತ ಶಿಕ್ಷಣ ತಜ್ಞ, ಉದ್ಯಮಿ, ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ. ಸಿಎ. ಎ. ರಾಘವೇಂದ್ರ ರಾವ್ (88) ನಿಧನರಾದರು.
1988ರಲ್ಲಿ ಎ. ಶಾಮ್ ರಾವ್ ಪ್ರತಿಷ್ಠಾನವನ್ನು ಸ್ಥಾಪಿಸಿದ ಡಾ. ಸಿ.ಎ. ಎ. ರಾಘವೇಂದ್ರ ರಾವ್ ಅವರು, ಶ್ರೀನಿವಾಸ್ ಗ್ರೂಪ್ ಆಫ್ ಕಾಲೇಜುಗಳು ರಾಜ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಾಗಿ ಬೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಏಳು ವಿದ್ಯಾರ್ಥಿಗಳೊಂದಿಗೆ ಆರಂಭವಾದ ಶ್ರೀನಿವಾಸ್ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ನಂತರ ಹಲವು ವೃತ್ತಿಪರ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಾಗಿ ವಿಸ್ತರಿಸಿತು.
1980ರಲ್ಲಿ ‘ಶ್ರೀನಿವಾಸ್’ ಎಂಬ ತ್ರಿ-ಸ್ಟಾರ್ ಸಸ್ಯಾಹಾರಿ ಹೋಟೆಲ್ ಸ್ಥಾಪಿಸಿದ್ದರು. ಶಿಕ್ಷಣ ಹಾಗೂ ಸಮಾಜಸೇವೆಯಲ್ಲಿ ನೀಡಿದ ಕೊಡುಗೆಗಾಗಿ ಅವರಿಗೆ ಕರ್ನಾಟಕ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ (2004) ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿವೆ.
ಮೃತರು ಪತ್ನಿ ವಿಜಯಲಕ್ಷ್ಮಿ, ಮಗಳು ಪದ್ಮಿನಿ, ಮಗ ಶ್ರೀನಿವಾಸ್ ಹಾಗೂ ನಾಲ್ವರು ಮೊಮ್ಮಕ್ಕಳನ್ನು ಅಗಲಿದ್ದಾರೆ.

