ಬ್ರಹ್ಮಾವರ ತಾಲ್ಲೂಕಿನ ಕುಂಜಾಲಿನ ಆರೂರು ಕ್ರಾಸ್ ಸಮೀಪ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಶೇಖರ್ ಟಿ ಕುಲಾಲ್ ಎಂದು ಗುರುತಿಸಲಾಗಿದೆ.

ಇಂದು ಬೆಳಿಗ್ಗೆ ತಮ್ಮ ಸ್ಕೂಟರಿನಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದಾಗ, ಪೇತ್ರಿ ಕಡೆಯಿಂದ ಬ್ರಹ್ಮಾವರ ಕಡೆ ಹೋಗುತ್ತಿದ್ದ ಗೂಡ್ಸ್ ವಾಹನ ಅತಿವೇಗದಿಂದ ಹಿಂದಿನಿಂದ ಡಿಕ್ಕಿಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಶೇಖರ್ ಕುಲಾಲ ಅವರ ತಲೆ, ಕೈಗೆ ತೀವ್ರ ತರದ ಪೆಟ್ಟಾಗಿದ್ದು, ತಕ್ಷಣ ಅವರನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ಸಾಗಿಸಲಾಗಿದ್ದು ಅದಾಗಲೇ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

