ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಎನ್ನುವವರ ಕೊಲೆ ಪ್ರಕರಣವನ್ನು ಮರು ತನಿಖೆ ಮಾಡಲು ಎಸ್ ಐ ಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶದ ಪ್ರಕಾರ ಎಸ್ ಐ ಟಿ ತಂಡದಲ್ಲಿ ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬು ರಾವ್ ನೇತೃತ್ವ ವಹಿಸಲಿದ್ದು, ತಂಡದಲ್ಲಿ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಡಿವೈಎಸ್ಪಿ ಎಂ ಆರ್ ಹರೀಶ್ ಇರಲಿದ್ದಾರೆ.
2022 ರ ಡಿ 18 ರಂದು ಶಿಬಾಜೆಯ ತೋಟದಲ್ಲಿ ನಡೆದಿದ್ದ ಶ್ರೀಧರ ಅವರ ಕೊಲೆ ಪ್ರಕರಣದ ಪೊಲೀಸ್ ತನಿಖೆ ಸಮರ್ಪಕವಾಗಿ ನಡೆಯದ ಹಿನ್ನೆಲೆಯಲ್ಲಿ ಹರೀಶ್ ಮುಗೇರ ಎನ್ನುವವರು ಪ್ರಕರಣದ ಮರುತನಿಖೆ ಕೋರಿ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ವಿಚಾರಣೆಯ ಬಳಿಕ ಪ್ರಕರಣದ ಮರು ತನಿಖೆಗೆ ವಿಶೇಷ ತನಿಖೆ ತಂಡ ರಚಿಸುವಂತೆ ನ್ಯಾಯಾಲಯ ಆದೇಶಿಸಿತ್ತು. ಇದೀಗ ಡೈರೆಕ್ಟರ್ ಜನರಲ್ ಆಫ್ ಪೋಲೀಸ್ ಡಾ. ಸಲೀಂ ಅವರು ವಿಶೇಷ ತನಿಖಾ ತಂಡ ರಚಿಸಿ ಆದೇಶಿಸಿದ್ದಾರೆ.

