ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಮಾಡುವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದ ಆರೋಪಿ ಮೇಲೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗಿದ್ದ ಕೊಲೆಗೀಡಾದ ಸುಹಾಸ್ ಶೆಟ್ಟಿಯ ಫೋಟೊವೊಂದರ ಕಮೆಂಟ್ ಬಾಕ್ಸ್ನಲ್ಲಿ ಶಂಕರ್ 11916 ಎಂಬ ಇನ್ಸ್ಟಾಗ್ರಾಂ ಖಾತೆಯಿಂದ ಈ ಬರಹ ಬರೆಯಲಾಗಿದೆ. “ಸಪೋರ್ಟ್ ಮಾಡಿ ಬ್ರೋ ಉಳ್ಳಾಲ ಮಸ್ಜಿದ್ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ” ಎಂದು ಬರೆಯಲಾಗಿದೆ.
ಈ ಬಗ್ಗೆ ಅಲರ್ಟ್ ಆದ ಪೊಲೀಸರು ಉಳ್ಳಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶೀಘ್ರವೇ ಆರೋಪಿಯನ್ನು ಬಂಧಿಸಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.

