ರಾಜ್ಯದ 2026-27 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ದಾಖಲೆಯ 17 ನೇ ಬಾರಿಗೆ 4.48 ಲಕ್ಷ ಕೋಟಿ ಗಾತ್ರದ ಆಯವ್ಯಯ ಮಂಡಿಸಿದ್ದಾರೆ.
ರಾಜ್ಯ ಬಜೆಟ್ ಮುಖ್ಯಾಂಶಗಳು:
- 16 ವರ್ಷದ ಒಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್
- ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಇನ್ನು ಶಾಂತವೇರಿ ಗೋಪಾಲ ಗೌಡ ಆಸ್ಪತ್ರೆ
- ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ಮೀಸಲು
- ಕಾಲೇಜು ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಪುನರಾರಂಭ
- ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಸಾಲ
- ರಾಜ್ಯದ 5 ಕಡೆ ರೇಷ್ಮೆ ಪಾರ್ಕ್
- ಬೆಂಗಳೂರು ಮೆಟ್ರೋ ವಿಸ್ತರಣೆ
- ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2 ಸಾವಿರ ಹುದ್ದೆ ಭರ್ತಿ
- ಶಾಲಾ ಕಾಲೇಜುಗಳಿಗೆ 15 ಸಾವಿರ ಶಿಕ್ಷಕರ ನೇಮಕಾತಿ
- ಕಾರವಾರದಲ್ಲಿ 198 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
- ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನ ಮಾತೃತ್ವ ರಜೆ
- ಅಲ್ಪಸಂಖ್ಯಾತ , SC-ST ನಿಗಮಗಳ ಸಾಲಗಳಿಗೆ ಬಡ್ಡಿ ಮನ್ನಾ
- ಮಾನವ ವನ್ಯ ಜೀವಿಗಳ ಸಂಘರ್ಷ ತಡೆಗೆ 1445 ಕೋಟಿ ಮೀಸಲು
- ಗರ್ಭಿಣಿ, ಬಾಣಂತಿಯರಿಗೆ ಅಂಗನವಾಡಿಯಲ್ಲಿ ಬಿಸಿಯೂಟ
- ರಾಜ್ಯದ 11 ಜಿಲ್ಲೆಗಳಲ್ಲಿ 12 ಪೋಲಿಸ್ ಠಾಣೆ ಸ್ಥಾಪನೆ
- ಕುಕ್ಕೆ ಕೊಲ್ಲೂರು ದೇಗುಲ ಅಭಿವೃದ್ಧಿ
- ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ವಿತರಣೆ
- ಉದ್ಯೋಗಸ್ಥ SC-ST ಮಹಿಳೆಯರಿಗೆ ಹೊಸ ಹಾಸ್ಟೆಲ್ ಘೋಷಣೆ
- ಈ ವರ್ಷ 1.32 ಲಕ್ಷ ಕೋಟಿ ಸಾಲ ಮಾಡಿದ ಸರ್ಕಾರ
- ಕರ್ನಾಟಕ ರಾಜ್ಯದ ಒಟ್ಟಾರೆ ಸಾಲ 8.24 ಲಕ್ಷ ಕೋಟಿ
- ಬೆಂಗಳೂರಿನಲ್ಲಿ AI ಕೇಂದ್ರ
- ಒಟ್ಟು 56,432 ಹುದ್ದೆಗಳಿಗೆ ನೇಮಕಾತಿ
- ಮದ್ಯ ದರ ಹಂತ ಹಂತವಾಗಿ ಏರಿಕೆ
- ಸವಿತಾ ಸಮಾಜದವರಿಗೆ ಸಲೂನ್ ತೆರೆಯಲು ಶೇ 4 ಬಡ್ಡಿ ದರದಲ್ಲಿ 10 ಲಕ್ಷ ಸಾಲ
- ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಜೊತೆಗೆ 300 ಹಾಸಿಗೆಯ ಆಸ್ಪತ್ರೆ
- 2 ಮಹಿಳಾ ವೃದ್ಧಾಶ್ರಮ ಸ್ಥಾಪನೆ
- ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ
- ಅಲ್ಪಸಂಖ್ಯಾತ ಮಹಿಳಾ ಸಹಕಾರಿ ಸಂಘ ಸ್ಥಾಪನೆ ಘೋಷಣೆ
- ಮಲೆನಾಡು ಕರಾವಳಿಯಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಅನುದಾನ
- ಮೀನುಗಾರರಿಗೆ ಪ್ರೋತ್ಸಾಹ ಧನ 20 ಸಾವಿರಕ್ಕೆ ಏರಿಕೆ
- ಗ್ರಾಮ ಪಂಚಾಯತ್ ವಿದ್ಯುತ್ ಬಿಲ್ ಹೊರೆ ತಪ್ಪಿಸಲು ಸೋಲಾರ್ ಗ್ರಿಡ್ ಸ್ಥಾಪನೆ

