ಮಂಗಳೂರು: ಮಹಿಳೆಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಹೋಗಿ ಮಾನಹಾನಿ ಮಾಡಿದ ಆರೋಪಿಗೆ 7ನೇ ಜೆಎಂಎಫ್ಸಿ ನ್ಯಾಯಾಲಯವು 1 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿದೆ.
ದ್ವಿಚಕ್ರ ವಾಹನ ಸವಾರ ಪ್ರವೀಣ್ ಯಾನೆ ಸಂತೋಷ್ ಶಿಕ್ಷೆಗೊಳಗಾದ ಆರೋಪಿ ಎಂದು ತಿಳಿದು ಬಂದಿದೆ.
ಉಳ್ಳಾಲ ತಾಲೂಕಿನ ಕೋಟೆಕಾರು ಗ್ರಾಮದ ಪನೀರ್ ಚರ್ಚ್ ಬಳಿ ಪ್ರವೀಣ್ ಯಾನೆ ಸಂತೋಷ್ ಎಂಬಾತ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗಿ ಅವಾಚ್ಯ ಶಬ್ದಗಳಿಂದ ಬೈದು, ಕೈ ಹಿಡಿದು ಎಳೆದು ಮಾನಹಾನಿ ಮಾಡಿದ್ದಾನೆ ಎಂದು ಆರೋಪಿಸಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಾದ-ಪ್ರತಿವಾದಗಳನ್ನು ಆಲಿಸಿದ 7ನೇ ಜೆಎಂಎಫ್ಸಿ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶ ಚಿರಾಗ್ ಸಿ. ಈ ತೀರ್ಪು ನೀಡಿದ್ದಾರೆ.

