ಮಂಗಳೂರು : ಹಣಕಾಸಿನ ದ್ವೇಷಕ್ಕಾಗಿ ವ್ಯಕ್ತಿಯನ್ನು ಕೆಂಪು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿ ಮುರುಗನ್ಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 10,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
2022ರ ಮಾರ್ಚ್ 19ರಂದು ಮುಲ್ಕಿಯ ಬಪ್ಪನಾಡು ಬಳಿ ಉಲ್ಲಂಜೆಯ ಹರೀಶ್ ಸಾಲ್ಯಾನ್ (47) ಎಂಬುವವರನ್ನು ಹಣಕಾಸಿನ ಕಾರಣಕ್ಕೆ ಹತ್ಯೆ ಮಾಡಲಾಗಿತ್ತು.
ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ಈ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ.
ಈ ಪ್ರಕರಣದ ತನಿಖೆಯನ್ನು ಪೊಲೀಸ್ ಇನ್ಸ್ಪೆಕ್ಟರ್ ಕುಸುಮಾಧರ್ ಅವರು ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಇವರಿಗೆ ಎಎಸ್ಐ ಸಂಜೀವ್ ಅವರು ತನಿಖೆಯಲ್ಲಿ ಸಹಕರಿಸಿದ್ದರು. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ರೀಮತಿ
ಜ್ಯೋತಿ ಪ್ರಮೋದ್ ನಾಯಕ್ ಅವರು ಮಂಡಿಸಿದ ಪ್ರಬಲ ವಾದ ಮತ್ತು ಸಾಕ್ಷ್ಯಾಧಾರಗಳನ್ನು ಪುರಸ್ಕರಿಸಿದ ನ್ಯಾಯಾಲಯವು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ನ್ಯಾಯ ಒದಗಿಸಿದೆ.

