ಬೆಂಗಳೂರು : ರಾಜ್ಯ ಸರಕಾರವು ವೈದ್ಯರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವುದರಿಂದ ಮಾ.11ರಿಂದ ನಡೆಯಬೇಕಿದ್ದ ಸರಕಾರಿ ವೈದ್ಯರ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಸರಕಾರಿ ವೈದ್ಯಾಕಾರಿಗಳ ಸಂಘದ ಅಧ್ಯಕ್ಷ ಡಾ.ರವೀಂದ್ರನಾಥ ಎಂ.ಮೇಟಿ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯರು, ನೌಕರರು ಕರ್ತವ್ಯ ಬಹಿಷ್ಕರಿಸಿ ಮಾ.11ರಿಂದ ಮುಷ್ಕರ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ನಮ್ಮ ಬೇಡಿಕೆಗಳ ಈಡೇರಿಕೆ ಬಗ್ಗೆ ಸರಕಾರವು ಸಕಾರತ್ಮಕವಾಗಿ ಪ್ರತಿಕ್ರಿಯಿಸಿದೆ.
ಹೀಗಾಗಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದರು

