ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಉಳ್ಳಾಲದ #
ಶೇಕ್ ಅರ್ಬಾಜ್ ಹಾಗೂ ರಶೀದ್ ಆಲ್ವಿನ್ ಎಂದು ಗುರುತಿಸಲಾಗಿದೆ.
ಕಾರ್ಯಾಚರಣೆ ವೇಳೆ ಮಂಜೇಶ್ವರದ ಅಲ್ತಾಫ್ ಎಂಬಾತ ಸ್ಕೂಟರ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.
ಉಳ್ಳಾಲ ತಾಲೂಕಿನ ಕೋಟೇಕಾರ್ ಗ್ರಾಮದ ಬಗಂಬಿಲ ಸಮೀಪದ ಗೌಂಡ್ ಪ್ರದೇಶದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಮಾ. 12ರಂದು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ₹51,500 ಮೌಲ್ಯದ 1 ಕೆಜಿ 110 ಗ್ರಾಂ ಗಾಂಜಾ, ₹520 ನಗದು ಹಾಗೂ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ತಲೆಮರೆಸಿಕೊಂಡಿರುವ ಆರೋಪಿ ಅಲ್ತಾಫ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

