ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಡೇಲು ಸುತ್ತು ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಶನಿವಾರ ನಡೆದ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಮೈಸೂರು ಮೂಲದ ಸಮೃದ್ಧ್ ಮೃತಪಟ್ಟವರು.
ಸಮೃದ್ ಅವರು ತಮ್ಮ ಸಹಪಾಠಿ ಬೆಳ್ತಂಗಡಿ ಮೂಲದ ನಿಶಾಂತ್ ಅವರೊಂದಿಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿದ್ದ ಕ್ರೀಡಾಕೂಟದಿಂದ ಮರಳಿ ಮಿಜಾರ್ನಲ್ಲಿರುವ ತಮ್ಮ ಹಾಸ್ಟೆಲಿಗೆ ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭ ಮಂಗಳೂರು ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ವಿದ್ಯಾಗಿರಿ ಸಮೀಪದ ಹಂಡೇಲು ಸುತ್ತಿನಲ್ಲಿ ಬೈಕ್ಗೆ ಡಿಕ್ಕಿಯಾಗಿ ಸಮೃದ್ಧ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ನಿಶಾಂತ್ ಅವರ ಭುಜಕ್ಕೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

