ಉಡುಪಿ: ಉಡುಪಿ ನಗರಸಭೆಯ ಪ್ರಸಕ್ತ ಸಾಲಿನ ಎಸ್ಎಫ್ಸಿ ಮುಕ್ತ ನಿಧಿಯ ಶೇ.7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮಾ. 23 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಪೌರಾಯುಕ್ತರು, ಉಡುಪಿ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

