ಮಾರ್ಚ್ 18ರವರೆಗೆ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳ ಮಳೆ ವಿವರಗಳನ್ನು ಇಲ್ಲಿ ತಿಳಿಯಿರಿ…
ಕರ್ನಾಟಕದಲ್ಲಿ ಮಾರ್ಚ್ ತಿಂಗಳ ಹವಾಮಾನದಲ್ಲಿ ಮಹತ್ವದ ಬದಲಾವಣೆಗಳು ಕಾಣಿಸುತ್ತಿದ್ದು, ಬಿಸಿಲಿನ ನಡುವೆಯೇ ಮಳೆಯ ಚಟುವಟಿಕೆಗಳು ಹೆಚ್ಚಾಗುತ್ತಿರುವುದು ಸ್ಪಷ್ಟವಾಗಿದೆ.
18-03-2026ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಬಹುತೇಕ ಎಲ್ಲಾ ಭಾಗಗಳಲ್ಲಿ ‘ಬಿಸಿಲು + ಗುಡುಗು ಮಳೆ’ ಎಂಬ ಮಿಶ್ರ ವಾತಾವರಣ ಮುಂದುವರಿಯಲಿದೆ.
ಈ ಹವಾಮಾನ ಮಾದರಿ ಸಾಮಾನ್ಯವಾಗಿ ಬೇಸಿಗೆಯ ಆರಂಭದಲ್ಲಿ ಕಾಣಿಸಿಕೊಳ್ಳುತ್ತದೆ. ದಿನದಲ್ಲಿ ಉಷ್ಣತೆ ಹೆಚ್ಚಾಗಿ, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಹಾಗೂ ಮಳೆಯಾಗುವ ಸಂಭವ ಹೆಚ್ಚು ಇರುತ್ತದೆ.
ಕರಾವಳಿ ಭಾಗದ ಹವಾಮಾನ
ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಪ್ರದೇಶಗಳಲ್ಲಿ ಬೆಳಿಗ್ಗೆಯಿಂದಲೇ ತೀವ್ರ ಬಿಸಿಲು ಕಾಣಿಸಿಕೊಳ್ಳಲಿದೆ. ಆದರೆ ಮಧ್ಯಾಹ್ನದ ನಂತರ ಮೋಡಗಳ ಸೇರ್ಪಡೆ ಹೆಚ್ಚಾಗಿ, ವಾತಾವರಣದಲ್ಲಿ ತಕ್ಷಣ ಬದಲಾವಣೆ ಆಗುವ ಸಾಧ್ಯತೆ ಇದೆ.
ವಿಶೇಷವಾಗಿ ಸಂಜೆ ವೇಳೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯ ಸಾಧ್ಯತೆ ಇದೆ. ಗಾಳಿಯ ವೇಗ ಹೆಚ್ಚಾದರೆ ಕಾಸರಗೋಡು ಭಾಗಗಳಲ್ಲಿ ಸಾಮಾನ್ಯ ಮಳೆಯೂ ಸಂಭವಿಸಬಹುದು.
ಉತ್ತರ ಕನ್ನಡ ಜಿಲ್ಲೆಯ ಒಳನಾಡು ಗಡಿಭಾಗಗಳಲ್ಲಿ, ವಿಶೇಷವಾಗಿ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಹೊಂದಿಕೊAಡಿರುವ ಪ್ರದೇಶಗಳಲ್ಲಿ ಸಂಜೆ ಮಳೆಯ ಸಾಧ್ಯತೆ ಹೆಚ್ಚಿದೆ. ಈಗಿನ ಸ್ಥಿತಿಯನ್ನು ಗಮನಿಸಿದರೆ ಕರಾವಳಿ ಭಾಗಗಳಲ್ಲಿ ಮಾರ್ಚ್ 25ರವರೆಗೆ ಮಳೆ ಚಟುವಟಿಕೆ ಮುಂದುವರಿಯುವ ಲಕ್ಷಣಗಳು ಕಾಣಿಸುತ್ತಿವೆ.
ಮಲೆನಾಡು ಭಾಗದ ಹವಾಮಾನ
ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಮಲೆನಾಡು ಪ್ರದೇಶಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈ ಪ್ರದೇಶಗಳಲ್ಲಿ ಪರ್ವತ ಪ್ರದೇಶಗಳ ಕಾರಣದಿಂದ ಮೋಡಗಳ ರಚನೆ ವೇಗವಾಗಿ ನಡೆಯುತ್ತದೆ. ಇದರಿಂದಾಗಿ ಅಚಾನಕ್ ಮಳೆ ಹಾಗೂ ಮಿಂಚಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಪ್ರಸ್ತುತ ಹವಾಮಾನ ಸ್ಥಿತಿಯ ಪ್ರಕಾರ ಮಲೆನಾಡು ಜಿಲ್ಲೆಗಳಲ್ಲಿ ಮಾರ್ಚ್ 25ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಇದು ಕೃಷಿಗೆ ಸಹಾಯಕವಾಗಬಹುದು, ಆದರೆ ಮಿಂಚಿನ ಅಪಾಯ ಇರುವುದರಿಂದ ಎಚ್ಚರಿಕೆ ಅಗತ್ಯ.
ಉತ್ತರ ಒಳನಾಡಿನ ಹವಾಮಾನ
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯಪುರ ಭಾಗಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಗಾಳಿಯ ಪ್ರಭಾವ ಹೆಚ್ಚಾದರೆ ಕಲಬುರ್ಗಿ ಮತ್ತು ಬೀದರ್ ಜಿಲ್ಲೆಗಳಿಗೂ ಮಳೆ ವ್ಯಾಪಿಸಬಹುದು. ಈ ಭಾಗಗಳಲ್ಲಿ ಮಳೆಯ ಚಟುವಟಿಕೆ ಮಾರ್ಚ್ 29ರವರೆಗೆ ಮುಂದುವರಿಯುವ ಸೂಚನೆಗಳಿವೆ.
ಇದು ರೈತರಿಗೆ ಪ್ರಮುಖ ಸಮಯವಾಗಿದ್ದು, ಬೆಳೆಗಳನ್ನು ರಕ್ಷಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ. ಕೆಲವು ಕಡೆ ಗಾಳಿ ಜೋರಾಗಿರುವ ಸಾಧ್ಯತೆ ಇರುವುದರಿಂದ ಬೆಳೆ ಹಾನಿ ಸಂಭವಿಸಬಹುದು.
ದಕ್ಷಿಣ ಒಳನಾಡಿನ ಹವಾಮಾನ
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲೂ ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು-ಮಿಂಚು ಸಹಿತ ಮಳೆಯ ಮುನ್ಸೂಚನೆ ಇದೆ.
ದಿನದ ವೇಳೆ ತಾಪಮಾನ ಹೆಚ್ಚಾಗಿದ್ದರೂ, ಸಂಜೆ ವೇಳೆಗೆ ತಂಪಾದ ವಾತಾವರಣ ಉಂಟಾಗಲಿದೆ. ಈ ಭಾಗಗಳಲ್ಲಿ ಮಳೆ ಚಟುವಟಿಕೆ ಮಾರ್ಚ್ 20ರವರೆಗೆ ಮುಂದುವರಿಯುವ ಲಕ್ಷಣಗಳಿವೆ.
ನಗರ ಪ್ರದೇಶಗಳಲ್ಲಿ ಮಳೆ ಕಾರಣದಿಂದ ಟ್ರಾಫಿಕ್ ಸಮಸ್ಯೆಗಳು ಹಾಗೂ ನೀರು ನಿಂತುಕೊಳ್ಳುವ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ.
ಹವಾಮಾನದಲ್ಲಿ ಆಗಾಗ ಬದಲಾವಣೆ
ಒಟ್ಟಾರೆ, ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಬಿಸಿಲಿನ ಜೊತೆಗೆ ಗುಡುಗು-ಮಳೆಯ ಮಿಶ್ರ ಹವಾಮಾನ ಮುಂದುವರಿಯಲಿದೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಹೆಚ್ಚು ಮಳೆ ಸಾಧ್ಯತೆ ಇದ್ದರೆ, ಒಳನಾಡು ಭಾಗಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಮಳೆಯ ಚಟುವಟಿಕೆ ಹೆಚ್ಚು ಕಾಣಿಸಿಕೊಳ್ಳಲಿದೆ.
ಹವಾಮಾನದಲ್ಲಿ ಆಗಾಗ ಬದಲಾವಣೆ ಕಂಡುಬರುತ್ತಿರುವುದರಿAದ, ಜನರು ಹವಾಮಾನ ಮುನ್ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ತಮ್ಮ ದೈನಂದಿನ ಚಟುವಟಿಕೆಗಳನ್ನು ಯೋಜಿಸುವುದು ಉತ್ತಮ.

