ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಉಳ್ಳಾಲದ ಕೈರಂಗಳ ಗ್ರಾಮದ ಮೋಂಟುಗೋಳಿ ನಿವಾಸಿ ನವಾಜ್ (36) ಎಂದು ತಿಳಿದು ಬಂದಿದೆ.
ಮಾರ್ಚ್ 17 ರಂದು ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿ ಮಂಗಳೂರು ನಗರದ 7ನೇ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯವು ಆರೋಪಿಗೆ ಮಾ. 25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.

