ಮಂಗಳೂರು: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬರ್ಕೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.
2009ರಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಾಪಿರೈಟ್ ಕಾಯ್ದೆಯ ಉಲ್ಲಂಘನೆ ಪ್ರಕರಣಕ್ಕೆ (ಅಪರಾಧ ಕ್ರಮಾಂಕ 15/2009, ಕಲಂ 52(a), 63) ಸಂಬಂಧಿಸಿದಂತೆ ನಾಟೇಕಲ್ ದೇರಳಕಟ್ಟೆ ನಿವಾಸಿ ರಿಯಾಜ್ ಎಂಬಾತ ಪ್ರಮುಖ ಆರೋಪಿಯಾಗಿದ್ದ.
ಸುದೀರ್ಘ 17 ವರ್ಷಗಳ ಕಾಲ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ರಿಯಾಜ್ನನ್ನು, ಇಂದು ದಿನಾಂಕ 24-03-2026 ರಂದು ಬರ್ಕೆ ಪೊಲೀಸ್ ಠಾಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡ ಪತ್ತೆಹಚ್ಚಿ ಬಂಧಿಸಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಇತ್ತೀಚಿನ ದಿನಗಳಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹಳೆಯ ಕಡತಗಳನ್ನು ಪೂರ್ಣ ಪ್ರಮಾಣದಲ್ಲಿ ವಿಲೇವಾರಿ ಮಾಡುವ ಸಂಕಲ್ಪ ತೊಟ್ಟಂತೆ ಕಾಣುತ್ತಿದೆ. ಪ್ರತಿದಿನವೂ ಹಳೆಯ ಪ್ರಕರಣಗಳ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುತ್ತಿರುವ ಸುದ್ದಿ ಮಾಧ್ಯಮಗಳಿಗೆ ತಲುಪುತ್ತಿರುವುದು ಪೊಲೀಸರ ದಕ್ಷತೆಗೆ ಸಾಕ್ಷಿಯಾಗಿದೆ.

