ಉಡುಪಿ: ಉರಿ ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ಕರಾವಳಿಯ ಜನರಿಗೆ ಮಳೆರಾಯ ತಂಪೆರೆದಿದ್ದು ಜನರು ನಿಟ್ಟುಸಿರು ಬಿಡುವಂತಾಗಿದೆ.
ಇಂದು ಸಂಜೆಯ ನಂತರ ಕರಾವಳಿಯ ಹಲೆವೆಡೆ ಉತ್ತಮ ಮಳೆಯಾಗಿದೆ. ಸಂಜೆ ಯಿಂದಲೇ ಮೋಡ ಕವಿದ ವಾತಾವರಣ ಇದ್ದು, ರಾತ್ರಿ ವೇಳೆಗೆ ಉತ್ತಮ ಮಳೆಯಾಗಿದೆ. ಗುಡುಗು, ಮಿಂಚಿನೊಂದಿಗೆ ಮಳೆರಾಯನ ಆರ್ಭಟಕ್ಕೆ ಜನ ಫುಲ್ ಖುಷ್ ಆಗಿದ್ದಾರೆ.
ಉಡುಪಿ, ಮಣಿಪಾಲ, ಬ್ರಹ್ಮಾವರ, ಕುಂದಾಪುರದಾದ್ಯಂತ ಕಳೆದ ಒಂದು ಗಂಟೆಯಿಂದ ಉತ್ತಮ ಮಳೆಯಾಗಿದ್ದು ಗುಡುಗು- ಸಿಡಿಲಿನ ಅಬ್ಬರ ಜೋರಾಗಿದೆ. ಒಟ್ಟಾರೆ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿಗೆ ಮಳೆರಾಯ ತಂಪೆರೆದಿದ್ದಾನೆ.

