ಮಂಗಳೂರು: ಕೊಣಾಜೆ ಠಾಣಾ ವ್ಯಾಪ್ತಿಯ ಕಂಬಳಪದವು ಬಳಿ ಬೈಕ್ ಗೆ ಲಾರಿಯೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಗಂಭೀರ ಗಾಯಗೊಂಡ ಯುವಕನನ್ನು ನಡುಪದವಿನ ಬೇಬಿ ಎಂಬವರ ಪುತ್ರ ಸುಶಾಂತ್ (23) ಎಂದು ಗುರುತಿಸಲಾಗಿದೆ.
ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ಸಂದರ್ಭ ತಲೆಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಕೂಡಲೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಲಾರಿ ಚಾಲಕ ಬೈಕ್ ಗೆ ಡಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದ ಎಂದು ತಿಳಿದು ಬಂದಿದೆ.
ಬಳಿಕ ಪೊಲೀಸರು ಲಾರಿಯನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

