ಮಂಗಳೂರು: ನಗರದ ಕಾಲೇಜುಗಳ ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರಿಗೆ ಗಾಂಜಾ ಪೂರೈಸುತ್ತಿದ್ದ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿದ್ಯಾರ್ಥಿಗಳು ಬೇರೆ ಬೇರೆ ಕಾಲೇಜಿನವರಾಗಿದ್ದಾರೆ. ಇವರು ರೂಮಿನಲ್ಲಿ ಉಳಿದುಕೊಂಡು ನಾನಾ ಕಡೆಯಿಂದ ಗಾಂಜಾ ಖರೀದಿಸಿ ರೂಮಿನಲ್ಲಿ ಅದನ್ನು ಸಣ್ಣ ಸಣ್ಣ ಪ್ಯಾಕೆಟ್ಗಳಿಗೆ ತುಂಬಿಸಿ ವಿದ್ಯಾರ್ಥಿಗಳು ಮತ್ತಿತರರಿಗೆ ಮಾರಾಟ ಮಾಡುತ್ತಿದ್ದರು.
ವಿದ್ಯಾರ್ಥಿಗಳ ಬಳಿಯಿದ್ದ ಗ್ರಾಹಕರ ಪಟ್ಟಿಯನ್ನು ಪರಿಶೀಲಿಸಿದಾಗ ಅದರಲ್ಲಿ 6 ಕಾಲೇಜುಗಳ 40 ವಿದ್ಯಾರ್ಥಿಗಳು ಮತ್ತು 10 ಮಂದಿ ಇತರರಿದ್ದರು. ಆವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ತನ್ನ ಮಗನ ಬಳಿ ಸಣ್ಣ ಪ್ಯಾಕೆಟ್ ಗಾಂಜಾ ಸಿಕ್ಕಿರುವುದಾಗಿ ವಿದ್ಯಾರ್ಥಿಯೊಬ್ಬನ ಹೆತ್ತವರು ಪೊಲೀಸರ ಗಮನಕ್ಕೆ ತಂದಿದ್ದರು. ಈ ಹಿನ್ಬೆಯಲ್ಲಿ ತನಿಖೆ ನಡೆಸಿದಾಗ 5 ಮಂದಿ ವಿದ್ಯಾರ್ಥಿಗಳು ಗಾಂಜಾ ಮಾರಾಟ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

