ವಿಟ್ಲ; 35 ಬಾರಿ ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ವಿಟ್ಲ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಜಿ ಬಂಧಿತ ಆರೋಪಿ.
ಈತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಈತನನ್ನು ದಿನಾಂಕ 16/4/2026 ರಂದು ವಿದೇಶದಿಂದ ಹಿಂತಿರುಗುವಾಗ, ಇಮಿಗ್ರೇಶನ್ ವಿಭಾಗದ ಸಹಕಾರದಿಂದ, ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸ್ ಠಾಣಾ HC 2264 , PC 2355 ผี, PC 2463 ರವರುಗಳು ಬಂಧಿಸಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ

