ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್ (28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್ (26) ಬಂಧಿತರು.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಏ.16 ರಂದು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವ ಬಗ್ಗೆ ಮನೆಯವರಿಗೆ ಬಾಲಕಿ ತಿಳಿಸಿದ್ದು ಅದರಂತೆ ಪೋಷಕರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರಿನ ಆಧಾರದಲ್ಲಿ ತನಿಖೆ ನಡೆಸಿ, ಅತ್ಯಾಚಾರ ಎಸಗಿದ ಸುಮಂತ್ ಹಾಗೂ ನವನೀತ್ನನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಓರ್ವ ಆರೋಪಿ ಕಡುರುದ್ಯಾವರ ಗ್ರಾಮದ ಸುಮಂತ್ ಗೆ ಮೇ.10ರಂದು ಮದುವೆ ಕಾರ್ಯಕ್ರಮ ನಿಗದಿಯಾಗಿತ್ತು.ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿತ್ತು.








