ಉಡುಪಿ: ಬೆಳ್ತಂಗಡಿ ಮೂಲದ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣದಲಿ ಬಂಧಿತರಾಗಿರುವ ಪತ್ನಿ ಸೌಮ್ಯ ಶೆಟ್ಟಿ ಜಾಮೀನು ಅರ್ಜಿಯನ್ನು ಉಡುಪಿಯ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.
ಮಾರ್ಚ್ 22 ರಂದು ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿಗೆ ಮಗನ ಪತ್ನಿ ಸೌಮ್ಯ ಶೆಟ್ಟಿ ನೇರ ಕಾರಣ ಎಂದು ಮೃತ ಸುದೀಪ್ ರೈ ತಂದೆ ದಾಮೋದರ ರೈ ಕಾರ್ಕಳ ನಗರ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಸೌಮ್ಯ ಶೆಟ್ಟಿಯವರನ್ನು ಬಂಧಿಸಿದ್ದರು.
ಪ್ರಕರಣದಲ್ಲಿ ಬಂಧಿತ ಸೌಮ್ಯ ಶೆಟ್ಟಿ ಜಾಮೀನು ಕೋರಿ ಉಡುಪಿ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.
ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆದಿದ್ದು, ಪ್ರಾಸಿಕ್ಯೂಷನ್ ಪರವಾಗಿ ಸರ್ಕಾರಿ ಅಭಿಯೋಜಕ ಪ್ರಕಾಶ್ ಚಂದ್ರ ಶೆಟ್ಟಿ ವಾದ ಮಾಡಿಸಿದ್ದರು.

