ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ಸವಾರ ಪಾದೂರು ನಿವಾಸಿ ಪ್ರವೀಣ್ ಆಚಾರ್ಯ ಎಂದು ತಿಳಿದು ಬಂದಿದೆ.
ಇವರು ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಇಂದು ಎಂದಿನಂತೆ ತಮ್ಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದರು. ಪಾಂಗಾಳ ಸಮೀಪ ತಲುಪಿದಾಗ ಅತಿ ವೇಗವಾಗಿ ಬಂದ ಕಾರೊಂದು ಇವರ ಸ್ಕೂಟರ್ಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಡಿಕ್ಕಿಯ ರಭಸಕ್ಕೆ ಪ್ರವೀಣ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಕೂಟರ್ಗೆ ಡಿಕ್ಕಿ ಹೊಡೆದ ಕಾರು ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ವಾಹನ ಸಹಿತ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಕೂಡಲೇ ಗಾಯಾಳುವನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಾರಿಯಾದ ಕಾರನ್ನು ಪತ್ತೆಹಚ್ಚಲು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

