ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್ 12 ರಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ವಿಶೇಷ ವಿಮಾನದ ಮೂಲಕ ಆಗಮನ:
ಶುಕ್ರವಾರ ಬೆಳಗ್ಗೆ 12.30 ಕ್ಕೆ ತಮಿಳುನಾಡು ಸಿಎಂ ವಿಜಯ್ ಅವರು ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲುವಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಕೊಲ್ಲೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ದೇವಸ್ಥಾನದಲ್ಲಿ ವಿಶೇಷ ಪೂಜೆ:
ಅಂದು ಸಂಜೆ 3 ಗಂಟೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಲುಪಲಿರುವ ಅವರು, ದೇವಿಯ ಸನ್ನಿಧಿಯಲ್ಲಿ ನಡೆಯಲಿರುವ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಪೊಲೀಸ್ ಇಲಾಖೆಗೆ ಭದ್ರತೆಯ ಸೂಚನೆ:
ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಅವರು ಸಂಚರಿಸಲಿರುವ ರಸ್ತೆ ಮಾರ್ಗ ಹಾಗೂ ದೇವಸ್ಥಾನದ ಆವರಣದಲ್ಲಿ ಯಾವುದೇ ಲೋಪದೋಷಗಳಾಗದಂತೆ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಈಗಾಗಲೇ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.

