ಬ್ರಹ್ಮಾವರ: ಬೈಕಾಡಿ ಗ್ರಾಮದ ನಿವಾಸಿ ಹರೀಶ್ (49) ಎಂಬವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರ ಪುತ್ರ ನೀಡಿದ ಮಾಹಿತಿಯ ಪ್ರಕಾರ, ಹರೀಶ್ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದು, ಜುಲೈ 14 ರಂದು ಬೆಳಿಗ್ಗೆ 8.15 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯ ನಡುವಿನ ಅವಧಿಯಲ್ಲಿ ತಮ್ಮ ನಿವಾಸದ ಹಾಲ್ನಲ್ಲಿದ್ದ ಕಬ್ಬಿಣದ ಪಕ್ಕಾಸಿಗೆ ನೈಲಾನ್ ಹಗ್ಗ ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನೆಯ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 49/2026ರಡಿ ಕಲಂ 194 BNSS ಅನ್ವಯ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಸಂಕಷ್ಟದಲ್ಲಿರುವವರು ಕುಟುಂಬದವರು, ಸ್ನೇಹಿತರು ಅಥವಾ ಮಾನಸಿಕ ಆರೋಗ್ಯ ತಜ್ಞರ ನೆರವು ಪಡೆಯುವುದು ಅಗತ್ಯ.

