ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೀಟ್ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ರೌಡಿ ಶೀಟರ್ ನಿಖಿಲ್ನನ್ನು ಪೊಲೀಸರು ಬಂಧಿಸಿದ್ದಾರೆ.
ಜುಲೈ 13ರಂದು ಹಂದಾಡಿ-ಮಟಪಾಡಿ ಗ್ರಾಮ ಗಸ್ತು ವೇಳೆ, ಪೊಲೀಸ್ ಕಾನ್ಸ್ಟೇಬಲ್ ಕಿಶನ್ ಅವರು ರೌಡಿ ಶೀಟರ್ ನಿಖಿಲ್ನ ಮನೆಗೆ ಪರಿಶೀಲನೆಗಾಗಿ ತೆರಳಿದ್ದರು. ಮನೆ ಬಳಿ ನಿಖಿಲ್ ಕಾಣಿಸದ ಹಿನ್ನೆಲೆ ಕರೆ ಮಾಡಿದಾಗ, ಅವಾಚ್ಯ ಶಬ್ದಗಳಿಂದ ನಿಂದಿಸಿ, “ಬಂದು ಕೊಂದು ಹಾಕುತ್ತೇನೆ” ಎಂದು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಇದಾದ ಬಳಿಕ ರಾತ್ರಿ ಮತ್ತೆ ಹಲವು ಬಾರಿ ಕರೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸುವ ರೀತಿಯಲ್ಲಿ ಬೆದರಿಕೆ ಹಾಕಿದ ಆರೋಪವೂ ಕೇಳಿಬಂದಿದೆ.
ಪ್ರಕರಣ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ BNS ಕಲಂ 132, 351(2) ಮತ್ತು 352 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಿಖಿಲ್ ಹಂದಾಡಿ ಗ್ರಾಮದ ನಿವಾಸಿಯಾಗಿದ್ದು, ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ಪೊಲೀಸರ ಮಾಹಿತಿ ಪ್ರಕಾರ, ನಿಖಿಲ್ ವಿರುದ್ಧ ಈಗಾಗಲೇ ಸುಲಿಗೆ ಹಾಗೂ ಲೈಂಗಿಕ ಕಿರುಕುಳ ಸೇರಿದಂತೆ ಎರಡು ಪ್ರಕರಣಗಳು ದಾಖಲಾಗಿದ್ದು, ಆತ ರೌಡಿ ಶೀಟರ್ ಆಗಿದ್ದಾನೆ.

