ಬರ್ಗರ್, ಪಿಜ್ಜಾ ಸೇರಿದಂತೆ ಜಂಕ್ ಫುಡ್ಗಳಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, 10ನೇ ತರಗತಿವರೆಗಿನ ಶಾಲೆಗಳು ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಇಂತಹ ಆಹಾರ ಪದಾರ್ಥಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಆಹಾರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಬೆಂಗಳೂರಿನ ಆಹಾರ ಪರೀಕ್ಷಾ ಪ್ರಯೋಗಾಲಯವನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದರು. ಆಹಾರದ ಗುಣಮಟ್ಟದಲ್ಲಿ ಲೋಪ ಕಂಡುಬಂದರೆ, ದೊಡ್ಡ ಕಂಪನಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲು ಅತ್ಯಾಧುನಿಕ ಲ್ಯಾಬ್ ಸ್ಥಾಪಿಸಲಾಗುವುದು ಎಂದು ಸಚಿವರು ಹೇಳಿದರು.

