ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಜಾಲಕ್ಕೆ ಪೊಲೀಸರು ಬಿಗಿ ಹೊಡೆದಿದ್ದಾರೆ. ಬುಡ್ನಾರ್ನಲ್ಲಿ ಕಾರ್ಯಾಚರಣೆ ನಡೆಸಿದ ವಿಶೇಷ ತಂಡ ಮೂವರು ಆರೋಪಿಗಳನ್ನು ಬಂಧಿಸಿದೆ.
ಬಂಧಿತರಿಂದ ಎಂ.ಡಿ.ಎಂ.ಎ ಪೌಡರ್, ಹೈಡ್ರೋಗಾಂಜಾ, ಎಂ.ಡಿ.ಎಂ.ಎ ಟ್ಯಾಬ್ಲೆಟ್ ಹಾಗೂ ಗಾಂಜಾವನ್ನು, ಸಾಗಾಟಕ್ಕೆ ಬಳಸಿದ ಕಾರು ಸೇರಿದಂತೆ ಒಟ್ಟು ₹3.31 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾಪು, ಉಡುಪಿ, ಮಣಿಪಾಲ ಹಾಗೂ ಕಾರ್ಕಳ ಭಾಗಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

