ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಬಡಗನ್ನೂರಿನಲ್ಲಿ ಸಮುದಾಯ ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಿತ್ತಡ್ಕ ನಿವಾಸಿ ಪ್ರಜ್ಞಾ (26) ಅವರು ಜೂನ್ 21ರಂದು ತಮ್ಮ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

