ಬಂಟ್ವಾಳ: ಫರಂಗಿಪೇಟೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಳ್ಳತನಕ್ಕೆ ಸಂಬಂಧಿಸಿದ ಹಾಗೆ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ಮಾರಿಪಳ್ಳ ನಿವಾಸಿ ಮೊಹಮ್ಮದ್ ಶಾಖಿರ್ (33) ಎಂದು ಗುರುತಿಸಲಾಗಿದೆ.
ಬ್ಯಾಂಕಿನ ಮೇಲ್ಛಾವಣಿ ಕೊರೆದು ಒಳ ಪ್ರವೇಶಿಸಿ ಚಿನ್ನ, ಹಣ ಕಳ್ಳತನಕ್ಕೆ ಯತ್ನಿಸಿದ್ದ. ಈ ಬಗ್ಗೆ ಬೆಳ್ತಂಗಡಿ ಗ್ರಾಮಾಂತರ ಠಾಣೆಯಲ್ಲಿ ಜುಲೈ 13 ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯ ವಿಚಾರಣೆ ನಡೆಸಲಾಗಿದ್ದು, ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.

