ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಶಿಕ್ಷಣ ವ್ಯವಸ್ಥೆಯ ಸುಧಾರಣಾ ಹಿನ್ನೆಲೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ತಮ್ಮ ಉಪವಾಸ ಪ್ರತಿಭಟನೆ ನಿಲ್ಲಿಸಿದ್ದಾರೆ.
ಕೇಂದ್ರ ಸರ್ಕಾರ ಅವರಿಗೆ ಪ್ರಮುಖ ಮೂರು ಭರವಸೆಗಳನ್ನು ನೀಡಿದ್ದು, ಈ ಹಿನ್ನೆಲೆಯಲ್ಲಿ ಅವರು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿರುವುದಾಗಿದೆ.
ಶಾಂತಿಯುತ ಪ್ರತಿಭಟನೆ ನಡೆಸಿದವರ ವಿರುದ್ಧ ಯಾವುದೇ ಕಾನೂನು ಕ್ರಮ ಇಲ್ಲ, ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಸಂಬಂಧ ಸಂಸತ್ತಿನಲ್ಲಿ ಚರ್ಚೆ ನಡೆಸುವುದು ಮತ್ತು ನೀಟ್ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ಒದಗಿಸುವ ಭರವಸೆಗಳನ್ನು ಕೇಂದ್ರ ಸರ್ಕಾರ ನೀಡಿದೆ. ಈ ಹಿನ್ನೆಲೆ ಅವರು ತಮ್ಮ ಉಪವಾಸಕ್ಕೆ ಅಂತ್ಯ ಹಾಡಿದ್ದಾರೆ.
ಉಪವಾಸ ಸತ್ಯಾಗ್ರಹ ಕೊನೆಗೊಳಿಸಿದ ಬಳಿಕ ತಮ್ಮ ಬೆಂಬಲಿಗರಿಗೆ ಸಂದೇಶ ರವಾನಿಸಿರುವ ಅವರು, ದೇಶದಲ್ಲಿ ಯಾವುದೇ ರೀತಿಯ ಹಿಂಸಾಚಾರ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

