ಉಡುಪಿ: ಅಕ್ಕಪಡೆಯ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಕಾಣೆಯಾಗಿದ್ದ 8ನೇ ತರಗತಿಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಪತ್ತೆಹಚ್ಚಿ ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ನಡೆದಿದೆ.ಜುಲೈ 19ರಂದು ಉಡುಪಿ ಜಿಲ್ಲಾ ಕಂಟ್ರೋಲ್ ರೂಮ್ಗೆ 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಕಾಣೆಯಾಗಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಮಾಹಿತಿ ಸಿಗುತ್ತಿದ್ದಂತೆಯೇ ಅಕ್ಕಪಡೆಯ ಸಿಬ್ಬಂದಿ ತಕ್ಷಣವೇ ಹುಡುಕಾಟ ಆರಂಭಿಸಿದರು.ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಪರಿಶೀಲನೆ ನಡೆಸಿದ ವೇಳೆ, ಬಾಲಕ ಮುದ್ದೇಬಿಹಾಳಕ್ಕೆ ತೆರಳುವ ಬಸ್ನಲ್ಲಿ ಪ್ರಯಾಣಿಸುತ್ತಿರುವುದು ಪತ್ತೆಯಾಯಿತು.ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿ ಬಸ್ನ್ನು ನಿಲ್ಲಿಸಿ, ಬಾಲಕನನ್ನು ಸುರಕ್ಷಿತವಾಗಿ ವಶಕ್ಕೆ ಪಡೆದು, ಬಳಿಕ ಹೆಚ್ಚಿನ ಕ್ರಮಕ್ಕಾಗಿ ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಿದರು.ಅಕ್ಕಪಡೆಯ ಸಿಬ್ಬಂದಿಯ ತ್ವರಿತ ಸ್ಪಂದನೆ ಮತ್ತು ಜಾಗರೂಕತೆಯಿಂದ ಬಾಲಕ ಸುರಕ್ಷಿತವಾಗಿ ಪತ್ತೆಯಾಗಿದ್ದು, ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ

