ಉಡುಪಿ ಜಿಲ್ಲೆಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ಬ್ಯಾರಿಕೇಡ್ಗಳನ್ನು ಆಧುನೀಕರಿಸಿ ಏಕರೂಪದ ಗುಣಮಟ್ಟದೊಂದಿಗೆ ಮೇಲ್ದರ್ಜೆಗೇರಿಸುವ ಮಹತ್ವದ ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಕಲ್ಕೂರ ರೆಫ್ರಿಜರೇಟರ್ಸ್ ಸಂಸ್ಥೆಯ ಸಹಯೋಗದಲ್ಲಿ ಈ ಕಾರ್ಯ ಕೈಗೊಳ್ಳಲಾಗಿದ್ದು, ಮೊದಲ ಹಂತದಲ್ಲಿ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಂಟು ಬ್ಯಾರಿಕೇಡ್ಗಳನ್ನು ಸಂಪೂರ್ಣವಾಗಿ ನವೀಕರಿಸಿ ಜಿಲ್ಲಾ ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಯಿತು. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ಒಟ್ಟು 120 ಪೊಲೀಸ್ ಬ್ಯಾರಿಕೇಡ್ಗಳನ್ನು ಮರುನವೀಕರಣಗೊಳಿಸಿ ಡಬಲ್ ಪೊಲೀಸ್ ಬ್ಯಾರಿಕೇಡ್ಗಳಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಚಾಲನೆ ದೊರೆತಿದೆ.ಈ ಪೈಕಿ 59 ಸಿಂಗಲ್ ಹಾಗೂ 61 ಡಬಲ್ ಬ್ಯಾರಿಕೇಡ್ಗಳನ್ನು ಏಕರೂಪದ ವಿನ್ಯಾಸ, ಗುಣಮಟ್ಟ ಮತ್ತು ಬಳಕೆಯ ಮಾನದಂಡಗಳಿಗೆ ಅನುಗುಣವಾಗಿ ಮುಂದಿನ ಎರಡು ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ನವೀಕರಿಸಿ ಸಂಬಂಧಿತ ಪೊಲೀಸ್ ಠಾಣೆಗಳಿಗೆ ಮರುಹಸ್ತಾಂತರಿಸಲಾಗುತ್ತದೆ.
ಇಂದು ನಡೆದ ಕಾರ್ಯಕ್ರಮದಲ್ಲಿ ಮೊದಲ ಹಂತದ ಎಂಟು ನವೀಕರಿಸಲಾದ ಬ್ಯಾರಿಕೇಡ್ಗಳನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿ ರಾಮ್ ಶಂಕರ್, ಐಪಿಎಸ್ ಅವರಿಗೆ ಹಸ್ತಾಂತರಿಸಲಾಯಿತು.ಕಾರ್ಯಕ್ರಮದಲ್ಲಿ ಕಲ್ಕೂರ ರೆಫ್ರಿಜರೇಟರ್ಸ್ ಸಂಸ್ಥೆಯ ಮಾಲೀಕ ರಂಜನ್ ಕಲ್ಕೂರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

