ಬಂಟ್ವಾಳ: ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಕೆಲ ದಿನಗಳ ಹಿಂದಷ್ಟೇ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದ್ದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು 11 ದಿನಗಳ ಬಳಿಕ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.
ಹಾಡುಹಗಲೇ ಸಾರ್ವಜನಿಕ ಪ್ರದೇಶದಲ್ಲಿ ಮಚ್ಚಿನಿಂದ ಕೊಚ್ಚಿ ಯುವತಿ ಲಾವಣ್ಯಳನ್ನು ಚೇತನ್ ಕೊಲೆ ಮಾಡಿ ಓಡಿ ಹೋಗಿದ್ದ. ಘಟನೆ ನಡೆದ ಮರುದಿನ ಆತನನ್ನು ಮಂಗಳೂರಿನ ಪಚ್ಚನಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಆತ ವಿಷ ಸೇವನೆ ಮಾಡಿರುವುದು ಗೊತ್ತಾಗಿ ಆತನನ್ನು ಚಿಕಿತ್ಸಾ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯ ಸ್ಥಿರವಾದ ಬಳಿಕ ಆತನನ್ನು ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಲಾಗಿತ್ತು. ಆತನ ಆರೋಗ್ಯ ಪರಿಸ್ಥಿತಿ ಸುಧಾರಣೆಯಾಗಿದ್ದು ಆತನನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿರುವುದಾಗಿದೆ.

